ಮುಕ್ತಾಯ ಮಾಡು

    ಇತಿಹಾಸ

    ಇತಿಹಾಸದ ಪ್ರಕಾರ ಸ್ವಾತಂತ್ರ್ಯ ಪೂರ್ವದಲ್ಲಿ ಹೇಳುವಂತೆ, ರಾಮನಗರ ಪಟ್ಟಣವನ್ನು ಬ್ರಿಟಿಷ್ ಅಧಿಕಾರಿ “ಸರ್.ಬ್ಯಾರಿ ಕ್ಲೋಸ್” (1756-1813) ಅವರು ಆಳಿದರು. ಆದ್ದರಿಂದ ಇದನ್ನು ಮೊದಲು ಕ್ಲೋಸ್‌ಪೆಟ್ ಎಂದು ಕರೆಯಲಾಗುತ್ತಿತ್ತು. ನಂತರ ಇದನ್ನು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಶ್ರೀ.ಕೆಂಗಲ್ ಹನುಮಂತಯ್ಯ ಅವರು ರಾಮನಗರ ಎಂದು ಮರುನಾಮಕರಣ ಮಾಡಿದರು.ಇನ್ನೊಬ್ಬ ಹೆಸರಾಂತ ವ್ಯಕ್ತಿ ಶ್ರೀ.ಕೆಂಪೇಗೌಡರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನವರು. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ಯಾಗಿ ರಚಿಸಲಾಯಿತು. 2007 ರಲ್ಲಿ ರಾಮನಗರದಲ್ಲಿ ಜಿಲ್ಲಾ ಕೇಂದ್ರ ಕಚೇರಿಯೊಂದಿಗೆ ಇತರ ಮೂರು ತಾಲೂಕುಗಳನ್ನು ಅಂದರೆ ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ರಚಿಸಲಾಯಿತು. ರಾಮನಗರವು ರೇಷ್ಮೆ ಕೃಷಿಗೆ ಹೆಸರುವಾಸಿಯಾಗಿದೆ ಮತ್ತು ಸಿಲ್ಕ್ ಸಿಟಿ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಉತ್ಪತ್ತಿಯಾಗುವ ರೇಷ್ಮೆಯನ್ನು ಪ್ರಸಿದ್ಧ ಮೈಸೂರು ಸಿಲ್ಕ್‌ಗೆ ಉಪಯೋಗಿಸುತ್ತಾರೆ. ರಾಮನಗರವು ಏಷ್ಯಾದಲ್ಲೇ ರೇಷ್ಮೆ ಗೂಡುಗಳಿಗೆ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಪಟ್ಟಣಕ್ಕೆ ದಿನವೊಂದಕ್ಕೆ 50 ಟನ್‌ ರೇಷ್ಮೆ ಬರುತ್ತದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಾಗಿ ವಿಭಜಿಸಿದ ಪರಿಣಾಮವಾಗಿ ರಾಮನಗರದ ಹೊಸ ಜಿಲ್ಲೆಯ ರಚನೆಯ ನಂತರ ದಿನಾಂಕ 01.10.2007 ರಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ರಾಮನಗರವನ್ನು ಸ್ಥಾಪಿಸಲಾಯಿತು.

    ರಾಮನಗರ ನ್ಯಾಯಾಲಯ ಸಂಕೀರ್ಣ:

    ಆರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮತ್ತು ಸಿಜೆಎಂ, ರಾಮನಗರ ಮತ್ತು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ, ರಾಮನಗರ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ, ರಾಮನಗರ ಕಾರ್ಯನಿರ್ವಹಿಸುತ್ತಿತ್ತು. ನಂತರ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ, ರಾಮನಗರ ನ್ಯಾಯಾಲಯವನ್ನು 2009 ರಲ್ಲಿ ರಚಿಸಲಾಯಿತು, ಅದರ ನಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರ್ಯಾರಂಭ ಮಾಡಿದೆ.

    ಚನ್ನಪಟ್ಟಣ ನ್ಯಾಯಾಲಯ ಸಂಕೀರ್ಣ:

    ಆರಂಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ, ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದವು ನಂತರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು 2012 ರಲ್ಲಿ ಸ್ಥಾಪಿಸಲಾಯಿತು.

    ಕನಕಪುರ ನ್ಯಾಯಾಲಯ ಸಂಕೀರ್ಣ:

    ಆರಂಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಕಾರ್ಯನಿರ್ವಹಿಸುತ್ತಿತ್ತು. ನಂತರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕನಕಪುರ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು 2014 ರಲ್ಲಿ ಸ್ಥಾಪಿಸಲಾಯಿತು.

    ಮಾಗಡಿ ನ್ಯಾಯಾಲಯ ಸಂಕೀರ್ಣ:

    ಆರಂಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಮತ್ತು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ 2009 ರಿಂದ ಕಾರ್ಯನಿರ್ವಹಿಸುತ್ತಿದ್ದರು. ನಂತರ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು ಸ್ಥಾಪಿಸಲಾಯಿತು.